March 4, 2026
WhatsApp Image 2025-11-29 at 12.55.31 PM

ಉಡುಪಿ ಮೂಡನಿಡoಬೂರು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಜಯಪುರ ಜಿಲ್ಲೆ ಚಡಚಣ ತಾಲೂಕು ದೇವರನಿಂಬರಗಿ ಮೂಲದ ಯುವತಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂಡನಿಡಂಬೂರು ಗ್ರಾಮದ ಬನ್ನಂಜೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪ್ರೇಮಾಂಜಲಿ (24) ಎಂಬ ಯುವತಿ ನ.24ರಂದು ಮನೆಯಿಂದ ಹೊರಗೆ ಹೋದವರು ಬಳಿಕ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

4 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ತಿಳಿಸುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

About The Author

Leave a Reply

Your email address will not be published. Required fields are marked *

You cannot copy content of this page.