

ಉಡುಪಿ: ಆನ್‌ಲೈನ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಕ್ಷಾಂತರ ರೂ. ಹಣವನ್ನು ಹಿಂತಿರುಗಿಸದೆ ವಂಚಿಸಿರುವ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಕಿನ್ನಿಮುಲ್ಕಿಯ ಜಾರ್ಜ್ ರಫಾಯಲ್ ಮಚಾದೋ(65) ಎಂಬವರು ಆನ್‌ಲೈನ್ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದೆಂದು ನಂಬಿ, ಡಿ.20ರಿಂದ ಜ.25ರ ಮಧ್ಯಾವಧಿ ಯಲ್ಲಿ ಅಪರಿಚಿತರು ತಿಳಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಆನ್ ಲೈನ್ ಮೂಲಕ ಒಟ್ಟು 3,19,460ರೂ. ಹಣವನ್ನು ಹೂಡಿಕೆ ಮಾಡಿದ್ದರು. ಆದರೆ ಆರೋಪಿಗಳು ಈ ಹಣವನ್ನು ಹಿಂತಿರುಗಿಸದೇ ಮೋಸ ಮಾಡಿರುವುದಾಗಿ ದೂರಲಾಗಿದೆ.