March 19, 2026
WhatsApp Image 2025-01-07 at 12.47.02 PM

ಉಡುಪಿ: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ , ಫೈನಾನ್ಸ್ ಗಳು, ಲೇವಾದೇವಿ ವ್ಯವಹಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‌ಗಳು ನೀಡುವ ಮಾರ್ಗದರ್ಶನಗಳು ಹಾಗೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣದ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು

ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದ ಗ್ರಾಹಕರಿಗೆ ಕಿರುಕುಳದಂತಹ ಪ್ರಕರಣಗಳು ಕೇಳಿ ಬರುತ್ತಿವೆ. ಇವುಗಳಿಗೆಲ್ಲಾ ಕಾರಣ ಮಾರ್ಗಸೂಚಿಗಳು ಹಾಗೂ ನಿಯಮಗಳ ಪಾಲಿಸದೇ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದರು. ಮೈಕ್ರೋ ಫೈನಾನ್ಸ್ಗಳು ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಮತ್ತಿತರ ಪೂರ್ವಾಪರಗಳನ್ನು ಪರಿಶೀಲನೆಯನ್ನು ಮಾಡಿ, ಅವರ ಆದಾಯದ ಶೇ. 50 ರಷ್ಟು ಮಾತ್ರ ಸಾಲ ನೀಡಬೇಕು. ಆದರೆ, ಅವರು ಸಾಲ ತೆಗೆದುಕೊಳ್ಳುವ ಸಾಮರ್ಥ್ಯ ನೋಡದೇ ಸಾಲವನ್ನು ನೀಡಿರುವ ಬಗ್ಗೆ ಕಂಡುಬರುತ್ತಿದೆ. ಇವುಗಳಿಗೆ ಆಸ್ಪದ ನೀಡಬಾರದು. ಸಾಲ ನೀಡುವವರು ಹಾಗೂ ತೆಗೆದುಕೊಳ್ಳುವವರು ಇಬ್ಬರೂ ಸಹ ಆರ್ಥಿಕ ಶಿಸ್ತನ್ನು ಪಾಲಿಸಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದ ಗ್ರಾಹಕರಿಗೆ ಕಿರುಕುಳದಂತಹ ಪ್ರಕರಣಗಳು ಪತ್ರಿಕೆಗಳಲ್ಲಿ ಕೇಳಿ ಬರುತ್ತಿವೆ. ಇದಕ್ಕೆಲ್ಲಾ ಕಾರಣ ಮಾರ್ಗಸೂಚಿಗಳು ಹಾಗೂ ನಿಯಮಗಳ ಪಾಲಿಸದೇ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದರು. ಮೈಕ್ರೋ ಫೈನಾನ್ಸ್ಗಳು ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಮತ್ತಿತರ ಪೂರ್ವಾಪರಗಳನ್ನು ಪರಿಶೀಲನೆಯನ್ನು ಮಾಡಿ, ಅವರ ಆದಾಯದ ಶೇ. 50 ರಷ್ಟು ಮಾತ್ರ ಸಾಲ ನೀಡಬೇಕು. ಆದರೆ, ಅವರು ಸಾಲ ತೆಗೆದುಕೊಳ್ಳುವ ಸಾಮರ್ಥ್ಯ ನೋಡದೇ ಸಾಲವನ್ನು ನೀಡಿರುವ ಬಗ್ಗೆ ಕಂಡುಬರುತ್ತಿದೆ. ಇವುಗಳಿಗೆ ಆಸ್ಪದ ನೀಡಬಾರದು. ಸಾಲ ನೀಡುವವರು ಹಾಗೂ ತೆಗೆದುಕೊಳ್ಳುವವರು ಇಬ್ಬರೂ ಸಹ ಆರ್ಥಿಕ ಶಿಸ್ತನ್ನು ಪಾಲಿಸಬೇಕು ಎಂದರು.

ಸಾಲ ನೀಡಿದ ಫೈನಾನ್ಸ್ಗಳ ವಿರುದ್ಧ ತಿರುಗಿ ಬೀಳುವುದು ಅಥವಾ ಸಾಲ ಪಡೆದವರ ಮೇಲೆ ಫೈನಾನ್ಸ್ಗಳು, ಕಾನೂನು ಉಲ್ಲಂಘಿಸಿ ತಿರುಗಿ ಬಿದ್ದಲ್ಲಿ ಅಂತಹವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರು ಮೈಕ್ರೋ ಫೈನಾನ್ಸ್ ಸಂಬಂಧಿತಾ ಕಿರುಕುಳ ದೂರುಗಳನ್ನು ಕಂಟ್ರೋಲ್ ರೂಂ ಸಂಖ್ಯೆ: 0820-2574802 ಗೆ ಕಚೇರಿ ವೇಳೆಯಲ್ಲಿ ನೀಡಬಹುದಾಗಿದೆ ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಮಾತನಾಡಿ, ಮೈಕ್ರೋ ಫೈನಾನ್ಸ್ಗಳಲ್ಲಿ ತೆಗೆದುಕೊಳ್ಳುವ, ಕೊಡುವ ವ್ಯವಹಾರಗಳು ಶಾಂತಿಯುತವಾಗಿ ಆಗಬೇಕು. ಸಾಲ ವಸೂಲಾತಿಗಾಗಿ ಫೈನಾನ್ಸ್ ಕಂಪನಿಗಳು ಬೆಳಗ್ಗೆ 9 ಕ್ಕೂ ಮುನ್ನ ಸಂಜೆ 6 ರ ನಂತರ ಸಾಲಗಾರರ ಮನೆಗೆ ಹೋಗಬಾರದು. ಯಾವುದೇ ರೀತಿಯ ದೌರ್ಜನ್ಯಗಳನ್ನು ನಡೆಸಬಾರದು. ಒಂದೊಮ್ಮೆ ಉಲ್ಲಂಘಿಸಿದ್ದಲ್ಲಿ ಅಂಹವರ ಮೇಲೆ ನಿರ್ದ್ಯಾಕ್ಷಿಣ್ಯವಾಗಿ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

About The Author

Leave a Reply

Your email address will not be published. Required fields are marked *

You cannot copy content of this page.