March 16, 2025
WhatsApp Image 2025-02-04 at 6.21.25 PM

ಉಡುಪಿ: ಹೆಜಮಾಡಿ ಹಾಗೂ ಸಾಸ್ತಾನ ಟೋಲ್ ಗೇಟ್ ನಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ.ನಮ್ಮ ಹಣ ಟೋಲ್ ಪಾಸ್ ಆಗುವಾಗಉಡುಪಿ: ಹೆಜಮಾಡಿ, ಸಾಸ್ತಾನ ಟೋಲ್ ಗಳಲ್ಲಿ ಎರಡೆರಡು ಬಾರಿ ಹಣ ಲೂಟಿ – ಬಸ್ ಮಾಲಕರ ಸಂಘದಿಂದ ಪ್ರತಿಭಟನೆ ಎಚ್ಚರಿಕೆ ಒಮ್ಮೆ ಕಟ್ ಆಗುತ್ತದೆ.ಕೆಲವು ದಿನಗಳ ನಂತರ ಮತ್ತೆ ಕಡಿತ ಮಾಡ್ತಾರೆ .ಇದರಿಂದ ನಮಗೆ ಸಮಸ್ಯೆಯಾಗುತ್ತಿದೆ ಎಂದು ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು , ಹೆಜಮಾಡಿ ಹಾಗೂ ಸಾಸ್ತಾನ ಟೋಲ್ ಗೇಟ್ ನಲ್ಲಿ ಕಾನೂನುಬಾಹಿರವಾಗಿ ನಮ್ಮ ಟೋಲ್ ವ್ಯಾಲೆಟ್ ನಲ್ಲಿ ಇರುವ ಹಣವನ್ನು ಹೆಚ್ಚುವರಿಯಾಗಿ ಕಡಿತಗೊಳಿಸಲಾಗುತ್ತಿದೆ. ಒಂದು ದಿನಕ್ಕೆ ಸುಮಾರು 8 ರಿಂದ 10 ಲಕ್ಷ ರೂ.ಗಳನ್ನು ಬಸ್ ಮಾಲಕರಿಂದ ಲೂಟಿ ಮಾಡುತ್ತಿದ್ದಾರೆ. ಈ ಬಗ್ಗೆ ಜನಪ್ರತಿನಿಧಿಗಳಿಗೆ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ‌ ಫೆಬ್ರವರಿ 5ರಂದು ಟೋಲ್ ಗೇಟ್ ಗಳ ಮುಂದೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

About The Author

Leave a Reply

Your email address will not be published. Required fields are marked *

You cannot copy content of this page.