





ಬೆಂಗಳೂರು, ಜೂನ್ 04; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಪುತ್ತೂರು ವಿಭಾಗ ಶಿಶಿಕ್ಷು ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಜೂನ್ 8ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಶಿಶಿಕ್ಷು ಅಧಿನಿಯಮ 1961ರ ಅನ್ವಯ ಪೂರ್ಣ ಅವಧಿಯ ತಾಂತ್ರಿಕ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗದಿದ ಮೆಕ್ಯಾನಿಕಲ್ ಡೀಸೆಲ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಮೋಟಾರ್ ಮೆಕ್ಯಾನಿಕ್ ವೆಹಿಕಲ್, ವೆಲ್ಡರ್, ಫಿಟ್ಟರ್ ಈ ವೃತ್ತಿ ತರಬೇತಿಗೆ ಸಂದರ್ಶನ ನಡೆಯಲಿದೆ.
ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ ವಿವರಗಳು ಹೀಗಿವೆ.
ಮೆಕ್ಯಾನಿಕಲ್ ಡೀಸೆಲ್ (43 ಸ್ಥಾನ), ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ (10 ಸ್ಥಾನ), ಎಲೆಕ್ಟ್ರಿಷಿಯನ್ (20 ಸ್ಥಾನ), ಮೋಟಾರ್ ಮೆಕ್ಯಾನಿಕ್ ವೆಹಿಕಲ್ (19 ಸ್ಥಾನ), ವೆಲ್ಡರ್ (5 ಸ್ಥಾನ), ಫಿಟ್ಟರ್ (5 ಸ್ಥಾನ). ಈ ತರಬೇತಿಯ ಅವಧಿ ಒಂದು ವರ್ಷಗಳು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳು ಮೆಕ್ಯಾನಿಕ್ ಡೀಸೆಲ್ (32 ಸ್ಥಾನ) ತರಬೇತಿ ಅವಧಿ 2 ವರ್ಷ ಆಗಿದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆಧಾರ್ ಕಾರ್ಡ್ ಪ್ರತಿ-2, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ-2, ಆಧಾರ್ ನಂಬರ್ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಬಗ್ಗೆ ಸಂಬಂಧಿಸಿದ ಬ್ಯಾಂಕ್‍ನಿಂದ ದೃಢೀಕರಣ ಪತ್ರ, ಇ-ಮೇಲ್ ಐಡಿ, ವಿದ್ಯಾರ್ಹತೆಯ ಮೂಲ ದಾಖಲಾತಿ ಮತ್ತು ಜೆರಾಕ್ಸ್ ಪ್ರತಿ ಹಾಗೂ ಜಾತಿ ಪ್ರಮಾಣ ಮತ್ತು ಮೂಲ ಪ್ರತಿಯೊಂದಿಗೆ ನೇರ ಸಂದರ್ಶನಕ್ಕೆ ಆಗಮಿಸಬೇಕು.
ನೇರ ಸಂದರ್ಶನ ವಿಭಾಗೀಯ ನಿಯಂತ್ರಣಾಧಿಕಾರಿ, ಕರಾರಸಾಸಂ ನಿಗಮ, ವಿಭಾಗೀಯ ಕಚೇರಿ, ಪುತ್ತೂರು ವಿಭಾಗ, ಮುಕ್ರಂಪಾಡಿ, ದರ್ಬೆ ಅಂಚೆ, ಪುತ್ತೂರು, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7760990817 ಅನ್ನು ಸಂಪರ್ಕಿಸಬಹುದು.