ಬೆಳ್ತಂಗಡಿ ತಾ| ಪತ್ರಕರ್ತರ ಸಂಘದ ಕಚೇರಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್‌ಗೆ ಸ್ಥಳಾಂತರ

ಬೆಳ್ತಂಗಡಿ, ಮೇ 6: ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯ ವಾರ್ತಾಭವನ ಕಟ್ಟಡದಲ್ಲಿದ್ದ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಕಚೇರಿಯನ್ನು ಮಿನಿವಿಧಾನ ಸೌಧದ ಪಕ್ಕದಲ್ಲಿರುವ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್‌ನ ಎರಡನೇ ಮಹಡಿಗೆ ಸ್ಥಳಾಂತರ ಮಾಡಲಾಗಿದ್ದು, ನೂತನ ತಾತ್ಕಾಲಿಕ ಕಚೇರಿಯನ್ನು ಇಂದು ಸರಳ ರೀತಿಯಲ್ಲಿ ಸಾಂಕೇತಿಕವಾಗಿ ಉದ್ಘಾಟನೆ ಮಾಡಲಾಯಿತು.


ಬೆಳ್ತಂಗಡಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸುಸಜ್ಜಿತ ಕಟ್ಟಡ ನಿರ್ಮಾಣ ಆಗಲಿದ್ದು, ಇದಕ್ಕಾಗಿ ವಾರ್ತಾಭವನ ಕಟ್ಟಡವೂ ತೆರವುಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಪತ್ರಕರ್ತರ ಸಂಘದ ಕಚೇರಿ ಸ್ಥಳಾಂತರವಾಗಿದ್ದು, ಮುಂದಿನ ದಿನಗಳಲ್ಲಿ ಪತ್ರಿಕಾಗೋಷ್ಠಿಗಳು ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್‌ನಲ್ಲಿರುವ ಪತ್ರಿಕಾಭವನದಲ್ಲಿ ಕಚೇರಿಯಲ್ಲಿ ನಡೆಯಲಿದೆ.

Check Also

ಬೆಳ್ತಂಗಡಿ : ಮನೆಯಂಗಳದಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಕೆರೆಗೆ ಬಿದ್ದು ಮೃತ್ಯು

ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ಧರ್ಮಸ್ಥಳದ …

Leave a Reply

Your email address will not be published. Required fields are marked *

You cannot copy content of this page.