ಅನಧಿಕೃತ ಪ್ಲೆಕ್ಸ್, ಬ್ಯಾನರ್ ತಕ್ಷಣ ತೆರವುಗೊಳಿಸುವಂತೆ ಪಂಚಾಯತ್‌ಗಳಿಗೆ ವೇಣೂರು ಪೊಲೀಸರ ಸೂಚನೆ

ವೇಣೂರು: ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಠಿಯಿಂದ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲಾ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮುಂತಾದವುಗಳನ್ನು ತಕ್ಷಣ ತೆರವುಗೊಳಿಸುವಂತೆ ಪಂಚಾಯತ್‌ಗಳಿಗೆ ವೇಣೂರು ಪೊಲೀಸರು ಸೂಚಿಸಿದ್ದಾರೆ.
ಬ್ಯಾನರ್ ಹಾಕಲು ಸಕ್ಷಮದಿಂದ ಅನುಮತಿ ನೀಡುವಾಗ ಅದರ ಮಾಹಿತಿಯನ್ನು ಕಡ್ಡಾಯವಾಗಿ ಪೊಲೀಸ್ ಠಾಣೆಗೆ ತಿಳಿಸುವಂತೆಯೂ ಪಂಚಾಯತ್‌ಗಳಿಗೆ ನೀಡಲಾದ ನೋಟೀಸಿನಲ್ಲಿ ವಿವರಿಸಲಾಗಿದೆ. ಬ್ಯಾನರ್, ಬಂಟಿಂಗ್ಸ್‌ಗಳನ್ನು ಹರಿದು ವಿರೂಪಗೊಳಿಸಿ ಅಶಾಂತಿ ಸೃಷ್ಠಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಜಾಗೃತಕ್ರಮವಾಗಿ ಪೊಲೀಸರು ಈ ಕ್ರಮ ಕೈಗೊಂಡಿರುವುದಾಗಿ ತಿಳಿದು ಬಂದಿದೆ.

Check Also

ಬೆಳ್ತಂಗಡಿ : ಮನೆಯಂಗಳದಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಕೆರೆಗೆ ಬಿದ್ದು ಮೃತ್ಯು

ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ಧರ್ಮಸ್ಥಳದ …

Leave a Reply

Your email address will not be published. Required fields are marked *

You cannot copy content of this page.