ನಾಳೆ ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ಉಚಿತ ಬರವಣಿಗೆ ಪುಸ್ತಕದ ವಿತರಣೆ

ಕುಕ್ಕೇಡಿ, ಜೂ. 10: ಇಲ್ಲಿಯ ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ಇದರ ವತಿಯಿಂದ ಎಂಟರಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ನೀಡಲಾಗುವ ಉಚಿತ ಪುಸ್ತಕ ವಿತರಣಾ ಸಮಾರಂಭವು ಜೂ. 11ರಂದು ಬೆಳಿಗ್ಗೆ ಗಂಟೆ 9-30ರಿಂದ ಮಂಜುಶ್ರೀ ಭಜನಾ ಮಂದಿರದಲ್ಲಿ ಜರಗಲಿದೆ ಎಂದು ಭಜನ ಮಂಡಳಿ ಅಧ್ಯಕ್ಷರಾದ ಜಗನ್ನಾಥ ದೇವಾಡಿಗ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ವೈ. ಈಶ್ವರ ಭಟ್ ಮಂಜನಕ್ಕಿ ಗೌರವಾಧ್ಯಕ್ಷರು ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವೇಣೂರು ಎಸ್‌ಡಿಎಂ ಐಟಿಐನ ಕಿರಿಯ ತರಬೇತಿ ಅಧಿಕಾರಿ ನಾಗೇಶ್ ಉಡುಪ, ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷರಾದ ಜನಾರ್ಧನ ಪೂಜಾರಿ, ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ನಿರ್ಮಲ್ ಕುಮಾರ್ ಜೈನ್ ಮತ್ತಿತರರು ಭಾಗವಹಿಸಲಿದ್ದಾರೆ.

Check Also

ಬೆಳ್ತಂಗಡಿ : ಮನೆಯಂಗಳದಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಕೆರೆಗೆ ಬಿದ್ದು ಮೃತ್ಯು

ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ಧರ್ಮಸ್ಥಳದ …

Leave a Reply

Your email address will not be published. Required fields are marked *

You cannot copy content of this page.