May 18, 2025 12:41:21 AM
WhatsApp Image 2025-03-12 at 10.45.17 AM

ಮೂಡಬಿದ್ರಿ: ಭಜರಂಗ ದಳದ ನಗರ ಸಂಯೋಜಕರಾಗಿದ್ದ ವಿಜೇಶ್ ನಿಧನರಾಗಿದ್ದಾರೆ. ಅವರಿಗೆ 30 ವರ್ಷ ವಯಸ್ಸು ಆಗಿತ್ತು.

ಭಜರಂಗದಳದಲ್ಲಿ ಸಕ್ರಿಯರಾಗಿದ್ದ ಇವರು ಸಂಘಟನೆಯ ಹಲವಾರು ಹೋರಾಟಗಳಲ್ಲಿ ಭಾಗವಹಿಸಿದ್ದರು.

ಪುತ್ತಿಗೆ ಶ್ರೀ ಸೋಮನಾಥೇಶ್ವರನ ಬ್ರಹ್ಮಕಲಶೋತ್ಸವದಲ್ಲಿ ಅಹರ್ನಿಶಿ ಸೇವೆ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತಕ್ಕೆ ಒಳಪಟ್ಟು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರು ತಡ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ನಗರ ಸಂಯೋಜಕ ಸಮಾಜಮುಖಿ ಚಿಂತನೆಯುಳ್ಳ ಸಕ್ರಿಯ ಕಾರ್ಯಕರ್ತ ವಿಜೇಶ್ ಅವರ ನಿಧನಕ್ಕೆ ಹಲವಾರು ಗಣ್ಯರು, ಭಜರಂಗದಳದ ಮುಖಂಡರು ಸಂತಾಪ ಸೂಚಿಸಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>