

ಮಹಿಳೆಯೊಬ್ಬರ ವೀಡಿಯೋ ಕಾಲ್(Video Call) ರೆಕಾರ್ಡ್ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಚಾಮರಾಜನಗರ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಮೂಲದ ಅಜಿತ್ ಬಂಧಿತ ಆರೋಪಿ. ಜಿಲ್ಲೆಯ ಮಹಿಳೆಯೊಬ್ಬರನ್ನು ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಮಾಡಿಕೊಂಡ ಈತ ಆಕೆಯೊಟ್ಟಿಗೆ ಸಲುಗೆ ಬೆಳೆಸಿಕೊಂಡು ಆಪ್ತವಾಗಿ ಮಾತನಾಡಿದ್ದನ್ನು ರೆಕಾರ್ಡ್ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುವ ಜೊತೆಗೆ ಬೆದರಿಕೆ ಒಡ್ಡುತ್ತಿದ್ದ.
ಈ ಸಂಬಂಧ ನೊಂದ ಮಹಿಳೆ ಚಾಮರಾಜನಗರ ಸಿಒಎನ್ ಠಾಣೆಗೆ ದೂರು ಕೊಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡ ಸಿಇಎನ್ ಠಾಣೆ ಪಿಐ ಆನಂದ್ ಹಾಗೂ ತಂಡ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.