

ಅಳದಂಗಡಿ: ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ಸಂಕ್ರಾಂತಿಯ ಶುಭದಿನದಂದು
ಕನ್ನಡದ ಜನಪ್ರಿಯ ನಟ ವಿಜಯ ರಾಘವೇಂದ್ರ ಭೇಟಿ ನೀಡಿ, ವಿಶೇಷ ಸೇವೆ ನೀಡಿದರು.
ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅಳದಂಗಡಿ ತಿಮ್ಮಣ್ಣರಸರಾದ ಪದ್ಮಪ್ರಸಾದ್ ಅಜಿಲರು ಮತ್ತು ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆ ಉಪಸ್ಥಿತರಿದ್ದರು.