December 6, 2025
road

ಬೆಳ್ತಂಗಡಿ, ಎ. 15 ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಎ. ೧೭ರಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಎಸ್.ಡಿ.ಪಿ.ಐ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಒಂದೇ ದಿನ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದು, ಸಾವಿರಾರು ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆಯಿದ್ದು, ಬೆಳ್ತಂಗಡಿ ನಗರ ಹೆದ್ದಾರಿ ಅಸ್ತವ್ಯಸ್ತ ಆಗುವ ಸಂಭವವನ್ನು ತಪ್ಪಿಸಲು ಸಂಚಾರದಲ್ಲಿ ಬದಲಾವಣೆ ತರುವಂತೆ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ತಮ್ಮ ತಮ್ಮ ಕಾರ್ಯಕರ್ತರ ಜೊತೆ ಒಂದೇ ದಿನ ನಾಮಪತ್ರ ಸಲ್ಲಿಸಲಿರುವುದರಿಂದ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನ ಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇದೆ.
ಈ ಸಮಯದಲ್ಲಿ ಬೆಳ್ತಂಗಡಿ ಪೇಟೆಯನ್ನು ಹಾದು ಹೋಗುವ ಕಡೂರು-ಬಂಟ್ವಾಳ ಹದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಬೆಳಿಗ್ಗೆ ೯.೦೦ ಗಂಟೆಯಿಂದ ಸಂಜೆ ೫-೦೦ ಗಂಟೆಗಳವರೆಗೆ ಕೂಳ್ಳೂರು ಕ್ರಾಸ್ ರಸ್ತೆಯ ಮೂಲಕ ಆದ್ರುಪೆರಾಲ್ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು ಹಾಗೆಯೇ ಮಂಗಳೂರಿನಿಂದ ಉಜಿರೆ ಕಡೆಗೆ ಸಂಚರಿಸಲು ಗುರುವಾಯನಕರೆಯಲ್ಲಿ ಉಪ್ಪಿನಂಗಡಿ ರಸ್ತೆ ಮೂಲಕ ಪರಪ್ಪು ಕ್ರಾಸ್‌ನಲ್ಲಿ ಅದ್ರುಪರಾಲ್ ಮುಖಾಂತರ ಸಂಚರಿಸಲು ಸೂಚಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.