ಬೆಳ್ತಂಗಡಿ, ಎ. 15: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಇಂದು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾನ್ಯ ವಿಧಾನಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ಗೌಡ ನಾವೂರು ಹಾಗೂ ವಿವಿಧ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.