ವೇಣೂರು, ಎ. 16: ವೇಣೂರು ಪೊಲೀಸ್ ಠಾಣೆಯಲ್ಲಿ ಇಂದು ಪೊಲೀಸ್ ಉಪನಿರೀಕ್ಷಕ ಶ್ರೀಶೈಲಾ ಡಿ. ಮುರುಗೋಡು ಅವರ ನೇತೃತ್ವದಲ್ಲಿ ನೊಂದವರ ದಿನಾಚರಣೆಯನ್ನು ಆಚರಿಸಲಾಯಿತು.
ಪ್ರಕರಣದ ಸಂತ್ರಸ್ತರ ಆಹವಾಲು ಆಲಿಸಿದ ಪೊಲೀಸ್ ಉಪನಿರೀಕ್ಷರು ಪ್ರಕರಣದ ತನಿಖೆ ಪ್ರಗತಿ ಕುರಿತು ನೊಂದವರೊಂದಿಗೆ ಮಾಹಿತಿ ಹಂಚಿಕೊಂಡರು.
ಸಹಾಯಕ ಪೊಲೀಸ್ ಉಪನಿರೀಕ್ಷಕ ವೆಂಕಟೇಶ್ ನಾಯ್ಕ್, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.