ಇಸ್ಲಾಂಗೆ ಮತಾಂತರಗೊಳ್ಳಲು ನಿರಾಕರಿಸಿದ ವಿವಾಹಿತ ಹಿಂದೂ ಮಹಿಳೆ ಮೇಲೆ ಅತ್ಯಾಚಾರ

ಕರಾಚಿ: ಇಸ್ಲಾಂ ಧರ್ಮವನ್ನು ಸ್ವೀಕರಿಸಲು ನಿರಾಕರಿಸಿದ್ದಕ್ಕಾಗಿ ವಿವಾಹಿತ ಹಿಂದೂ ಮಹಿಳೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಘಟನೆ ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.

ಉಮರ್ಕೋಟ್ ಜಿಲ್ಲೆಯ ಸಮರೋ ಪಟ್ಟಣದಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಲಾದ ವೀಡಿಯೊದಲ್ಲಿ ಮಹಿಳೆ ಹೇಳಿದ್ದಾಳೆ.

ಸ್ಥಳೀಯ ಹಿಂದೂ ಮುಖಂಡರೊಬ್ಬರು ಮಾತನಾಡಿ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಲ್ಲಿ ಮಿರ್ಪುರ್ಖಾಸ್ ಪೊಲೀಸರು ವಿಫಲರಾಗಿದ್ದಾರೆ. ಸಂತ್ರಸ್ತ ಮಹಿಳೆ ಹಾಗೂ ಆಕೆಯ ಕುಟುಂಬದವರು ಠಾಣೆಯ ಹೊರಗೆ ಕುಳಿತಿದ್ದಾರೆ. ಆದರೆ, ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಆರೋಪಿಸಿದ್ದಾರೆ.

ವರದಿಯ ಪ್ರಕಾರ, ಸಂತ್ರಸ್ತೆ ತನ್ನನ್ನು ಇಬ್ರಾಹಿಂ ಮ್ಯಾಂಗ್ರಿಯೊ, ಪುನ್ಹೋ ಮ್ಯಾಂಗ್ರಿಯೊ ಮತ್ತು ಅವರ ಸಹಚರರು ಅಪಹರಿಸಿದ್ದಾರೆ. ಅಪಹರಣಕಾರರು ನನ್ನನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದರು. ಇದಕ್ಕೆ ಒಪ್ಪದಿದ್ದಕ್ಕೆ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ.

Check Also

ಬೆಳ್ತಂಗಡಿ : ಮನೆಯಂಗಳದಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಕೆರೆಗೆ ಬಿದ್ದು ಮೃತ್ಯು

ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ಧರ್ಮಸ್ಥಳದ …

Leave a Reply

Your email address will not be published. Required fields are marked *

You cannot copy content of this page.