
ಬೆಳ್ತಂಗಡಿ, ಎ. 24: ಮಾಜಿ ಸಚಿವ ಕೆ. ಗಂಗಾಧರ ಗೌಡ ವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ನೇಮಕವಾಗಿ ಖುಷಿಯಲ್ಲಿದ್ದ ಗೌಡರಿಗೆ ಐಟಿ ಶಾಕ್ ನೀಡಿದೆ.
ಇಂದಬೆಟ್ಟು, ಬೆಳ್ತಂಗಡಿಯಲ್ಲಿರುವ ಮನೆ ಸೇರಿದಂತೆ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳ ಮೇಲೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕೆಲ ವರ್ಷಗಳಿಂದ ರಾಜಕೀಯವಾಗಿ ತಟಸ್ಥವಾಗಿದ್ದರು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಇತ್ತೀಚೆಗೆ ರಕ್ಷಿತ್ ಶಿವರಾಂ ಅವರಿಗೆ ಟಿಕೆಟ್ ಲಭಿಸುತ್ತಲೇ ರಾಜಕೀಯ ಓಡಾಟದಿಂದ ಮತ್ತೆ ಹಿಂದೆ ಸರಿದಿದ್ದರು. ಇದೀಗ ಐಟಿ ದಾಳಿ ಶಾಕ್ ನೀಡಿದೆ.
