ಮರೋಡಿ ದೇವಸ್ಥಾನ: ನಾಳೆ ಪ್ರತಿಷ್ಠಾ ಮಹೋತ್ಸವ

ಮರೋಡಿ, ಎ. 24: ಆಲಡೆ ಕ್ಷೇತ್ರ ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಪ್ರತಿಷ್ಠಾ ಮಹೋತ್ಸವ ಎ. 25ರಂದು ನಡೆಯಲಿದೆ.
ಬೆಳಿಗ್ಗೆ 9-00ರಿಂದ ಚಂಡಿಕಾಯಾಗ, ಮೃತ್ಯುಂಜಯ ಹೋಮ, ಧನ್ವಂತರಿ ಹೋಮ, 108 ಸೀಯಾಳ ಅಭಿಷೇಕ ಹಮ್ಮಿಕೊಳ್ಳಲಾಗಿದೆ.
ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನqಯಲಿದೆ. ರಾತ್ರಿ 6 ಗಂಟೆಗೆ ಶ್ರೀಮತಿ ದೀಪಾ ಮತ್ತು ದೇವೇಂದ್ರ ಹೆಗ್ಡೆ ಕೊಕ್ರಾಡಿ ಕೊಡಂಗೆಗುತ್ತು ಅವರ ಸೇವಾರ್ಥ ಶ್ರೀ ಉಮಾಮಹೇಶ್ವರ ದೇವರಿಗೆ ರಂಗಪೂಜೆ ನಡೆಯಲಿದೆ.
ಈ ಪುಣ್ಯ ಕಾರ್ಯದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೇವರ ತೀರ್ಥ ಪ್ರಸಾದ ಸ್ವೀಕರಿಸುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ತಿಳಿಸಿದ್ದಾರೆ.

Check Also

ಬೆಳ್ತಂಗಡಿ : ಮನೆಯಂಗಳದಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಕೆರೆಗೆ ಬಿದ್ದು ಮೃತ್ಯು

ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ಧರ್ಮಸ್ಥಳದ …

Leave a Reply

Your email address will not be published. Required fields are marked *

You cannot copy content of this page.