
ಮಂಗಳೂರು, ಮೇ 29: ಕರಾವಳಿ ಜಿಲ್ಲೆಗಳಲ್ಲಿ ಇಂದು ರಾತ್ರಿ ಗುಡುಗು ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.




ಸೋಮವಾರ ಮಧ್ಯಾಹ್ನವೇ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಆರಂಭವಾಗಿದೆ. ಬೆಂಗಳೂರು, ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳ ವ್ಯಾಪ್ತಿಯಲ್ಲಿ ವಿವಿಧ ಕಡೆ ಗುಡುಗು ಮಿಂಚು ಸಹಿತ ಮಳೆ ಸುರಿಯುತ್ತಿದೆ. ಸೋಮವಾರ ರಾತ್ರಿ ಕೂಡ ರಾಜ್ಯದ ಹಲವು ಪ್ರದೇಶಗಳಲ್ಲಿ ಗುಡುಗು ಮಿಂಚು, ಬಿರುಗಾಳಿ ಸಹಿತ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
