March 13, 2026
WhatsApp Image 2023-03-30 at 9.10.59 PM

ಕೋಲಾರ: ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಕೋಲಾರದಿಂದ ನಾಲ್ವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಕೋಲಾರದಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಗಡಿಪಾರು ಮಾಡಲಾಗಿದ್ದು, ಇನ್ನೂ ಹತ್ತು ಜನರ ಗಡಿಪಾರಿಗೆ ಸಿದ್ಧತೆ ನಡೆಸಲಾಗಿದೆ.

598 ರೌಡಿ ಶೀಟರ್ ಗಳ ಮೇಲೆ ನಿಗಾ ವಹಿಸಲಾಗಿದೆ.

ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಬಾಂಡ್ ಬರೆಸಿಕೊಳ್ಳಲಾಗಿದ್ದು, ಭಾಗಿಯಾದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಕೋಲಾರ ಎಸ್ ಪಿ ಎಂ.ನಾರಾಯಣ ಎಚ್ಚರಿಕೆ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.