

ಮಂಗಳೂರು: ಇಲ್ಲಿಯ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ನಿಮಿತ್ತ ಶ್ರೀ ನಾಗದೇವರ ಕಟ್ಟೆಯ ಪುನರ್ ನಿರ್ಮಾಣಕ್ಕೆ ಇಂದು ಭೂಮಿಪೂಜೆ ನೆರವೇರಿಸಲಾಯಿತು.
ಶ್ರೀಹರಿ ಉಪಾಧ್ಯಾಯವರ ಪೌರೋಹಿತ್ಯದಲ್ಲಿ ನಡೆದ ಪೂಜಾ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮಂಡಳಿ, ವಿವಿಧ ಸಮಿತಿಯ ಪದಾಧಿಕಾರಿಗಳು, ಭಕ್ತರು ಭಾಗವಸಿದ್ದರು. ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಪ್ರಗತಿಯಲ್ಲಿದ್ದು, ಮೇ ೧೫ರಿಂದ ೨೪ರವರೆಗೆ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಜರಗಲಿದೆ.