![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಬೆಳ್ತಂಗಡಿ, ಮಾ. ೩೧: ತಾಲೂಕಿನ ೧೪ ಪರೀಕ್ಷಾ ಕೇಂದ್ರಗಳಲ್ಲಿ ೭೦ ಪ್ರೌಢಶಾಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿದ್ದು, ಪರೀಕ್ಷೆಗೆ ನೋಂದಾಯಿಸಿದ್ದ ೪೦೧೩ ಮಂದಿಯಲ್ಲಿ ೩೯೮೮ ವಿದ್ಯಾರ್ಥಿಗಳು ಹಾಜರಾಗಿದ್ದರು.
ಶುಕ್ರವಾರ ನಡೆದ ಪ್ರಥಮ ಭಾಷೆ ಪರೀಕ್ಷೆ ನಡೆದಿದ್ದು, ೩೯೭೮ ಹೊಸ ವಿದ್ಯಾರ್ಥಿಗಳು ಹಾಗೂ ೩೫ ಮಂದಿ ಮರು ಪರೀಕ್ಷೆ ಬರೆಯಲು ನೋಂದಾಯಿಸಿದ್ದರು. ಹೊಸ ವಿದ್ಯಾರ್ಥಿಗಳ ಪೈಕಿ ೧೯ ಮಂದಿ ಹಾಗೂ ಮರು ಪರೀಕ್ಷೆ ಬರೆಯುವ ೬ ಮಂದಿ ಗೈರು ಹಾಜರಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.