April 19, 2026
PERINJE NIA

ವೇಣೂರು, ಮೇ 31: ಭಯೋತ್ಪಾದಕ ಕೃತ್ಯಕ್ಕಾಗಿ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ರವಾನೆ ಆಗುತ್ತಿರುವ ಮಾಹಿತಿ ಆಧರಿಸಿ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ NIA ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪುತ್ತೂರಿನ ನಾಲ್ವರನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಹೊಸಂಗಡಿ ಗ್ರಾಮದ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪೆರಿಂಜೆ ಎಂಬಲ್ಲಿ ಬದ್ರುದ್ದಿನ್ ಯಾನೆ ಬದು ಮನೆಗೆ ಬೆಳಗ್ಗೆ 5-30ರ ವೇಳೆಗೆ ದಾಳಿ ನಡೆಸಿರುವ ಎನ್.ಐ.ಎ. ಅಧಿಕಾರಿಗಳು ಬದ್ರುದ್ದಿನ್ ಅವರ ಮೊಬೈಲ್ ಫೋನ್, ಬ್ಯಾಂಕ್‌ಗೆ ಸಂಬಧಿಸಿದ ದಾಖಲೆ ಹಾಗೂ ವ್ಯವಹಾರದ ದಾಖಲೆಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಬದ್ರುದ್ದಿನ್ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿರುವ ಬಗ್ಗೆ ತನಿಖೆಯಲ್ಲಿ ಪತ್ತೆಯಾಗಿದ್ದು, ಯಾವ ಕಾರಣಕ್ಕಾಗಿ ಹಣ ವರ್ಗಾವಣೆಯಾಗಿದೆ ಎಂಬ ಬಗ್ಗೆ ಖಚಿತ ಮಾಹಿತಿಗಾಗಿ ಬ್ಯಾಂಕ್ ದಾಖಲೆ ಹಾಗೂ ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಮಧ್ಯಾಹ್ನ 12.45ರವರೆಗೂ ಕಾರ್ಯಾಚರಣೆ ನಡೆಸಿದ್ದಾರೆ.
ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿ ಪತ್ತೆಯಾಗಿದ್ದ ಫುಲ್ಟಾರಿ ಶರೀಫ್ ಪುಕರಣದ ಬಳಿಕ ಈ ಕುರಿತ ತನಿಖೆ ಚುರುಕುಗೊಂಡಿತ್ತು. ಬಿಹಾರದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದು ತನಿಖೆಯ ವೇಳೆ ಬಯಲಾಗಿತ್ತು.

About The Author

Leave a Reply

Your email address will not be published. Required fields are marked *

You cannot copy content of this page.